ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: "ಸರಕಾರಿ ಶಾಲೆ ಅಭಿವೃದ್ಧಿ ಬಗ್ಗೆ ಹೆಚ್ಚಿನ ಮುತುವರ್ಜಿವಹಿಸಿ"

ಮುಲ್ಕಿ ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ ಬದಲಿಗೆ ಶಾಲೆಯ ಅಭಿವೃದ್ದಿಯ ಬಗ್ಗೆ ಹೆಚ್ಚಿನ ಮುತುವರ್ಜಿ ನೀಡುವ ಕಾರ್ಯವಾಗಬೇಕೆಂದು ತಾಲೂಕು ಪಂಚಾಯತ್ ಮಾಜಿ ಸದಸ್ಯ ದಿವಾಕರ ಕರ್ಕೇರಾ ಹೇಳಿದರು.

ಕಿನ್ನಿಗೋಳಿ ಸಮೀಪದ ಪದ್ಮನೂರಿನಲ್ಲಿ ಶಾಸಕ ಉಮನಾಥ ಕೋಟ್ಯಾನ್ ರವರ ಅನುದಾನದಲ್ಲಿ ನವೀಕರಣ ಗೊಂಡಿರುವ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಜಿ ಪಂಮಾಜಿ ಸದಸ್ಯೆ ಆಶಾ ರತ್ನಾಕರ ಸುವರ್ಣ , ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜಾ , ಗ್ರಾಮದ ಹಿರಿಯ ರಾಘುಭಂಡಾರಿ , ಸಾರ್ವಜನಿಕ ಬಯಲಾಟ ಸಮಿತಿಯ ಅಧ್ಯಕ್ಷ ಅಶೋಕ್ ಶೆಟ್ಟಿ ಧರ್ಮಗುರು ಫಾ| ಸಿರಿಲ್ ಫೆರ್ನಾಂಡಿಸ್, ಶಾಲಾ ಮುಖ್ಯ ಶಿಕ್ಷಕಿ ಐರಿನ್ ಫೆರ್ನಾಂಡಿಸ್ , ಶಾಲಾಭಿವೃಽ ಸಮಿತಿಯ ಅಧ್ಯಕ್ಷ ಸುರೇಶ್ ಶೆಟ್ಟಿಗಾರ್, ಜೂಲಿಯಾನ್ ಫೆರ್ನಾಂಡಿಸ್, ಮತ್ತಿತರರು ಉಪಸ್ಥಿತರಿದ್ದರು. ಸಹಶಿಕ್ಷಕಿ ಪ್ರಜ್ವಲಾ ಸ್ವಾಗತಿಸಿದರು. ಶಿಕ್ಷಕಿ ಸುಪ್ರೀತಾ ವಂದಿಸಿದರು. ಸಿಆರ್‌ಪಿ ರಾಮದಾಸ ಭಟ್ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

08/03/2022 10:46 pm

Cinque Terre

1.5 K

Cinque Terre

0

ಸಂಬಂಧಿತ ಸುದ್ದಿ