ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: "ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಎನ್ಎಸ್ಎಸ್ ಸಹಕಾರಿ"

ಮುಲ್ಕಿ: ಮಂಗಳೂರು ವಿಶ್ವವಿದ್ಯಾನಿಲಯ , ರಾಷ್ಟ್ರೀಯ ಸೇವಾ ಯೋಜನೆ,ವಿಜಯ ಕಾಲೇಜು ಮೂಲ್ಕಿಯ ಆಶ್ರಯದಲ್ಲಿ ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದಲ್ಲಿ ಮುಲ್ಕಿ ವಿಜಯ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ ಎಳವೆಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಕಲಿಸಲು ಎನ್ಎಸ್ಎಸ್ ಸಹಕಾರಿಯಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ರಾಷ್ಟ್ರಕ್ಕೆ ಮಾದರಿಯಾಗಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಿಜಯ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸುಹಾಸ್ ಹೆಗ್ಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿದಾಸ್ ಭಟ್, ಪಡುಪಣಂಬೂರು ಗ್ರಾಪಂ ಅಧ್ಯಕ್ಷೆ ಮಂಜುಳಾ ,ಉದ್ಯಮಿ ಪಿ. ಎಸ್. ಸುರೇಶ್ ರಾವ್ತೋ ಕೂರು ಯುವಕ ಸಂಘ (ರಿ.),ದ ಅಧ್ಯಕ್ಷ ವಿನೋದ್ ಕುಮಾರ್,ಕಾಲೇಜಿನ ಪ್ರಾಂಶುಪಾಲರಾದ ಡಾ| ಶ್ರೀಮಣಿ ಶೆಟ್ಟಿ , ಪಮೀದಾ ಬೇಗಂ ,ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಂಪತ್ ಕುಮಾರ್,ಎನ್ ಎಸ್ ಎಸ್ ಯೋಜನಾಧಿಕಾರಿ ಜಿತೇಂದ್ರ ವಿ ರಾವ್ ಹೆಜಮಾಡಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/03/2022 02:56 pm

Cinque Terre

1.19 K

Cinque Terre

0

ಸಂಬಂಧಿತ ಸುದ್ದಿ