ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 42 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯಲಿದೆ.
ಯಾವುದೇ ಗೊಂದಲಗಳಿಗೆ ಅವಕಾಶಗಳಿಲ್ಲದೆ ಪರೀಕ್ಷೆ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ದ.ಕ.ಜಿಲ್ಲೆಯಲ್ಲಿ ಒಟ್ಟು 29712 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. 15615 ಬಾಲಕರು, 14,097 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರುಹಿಬಾಬ್ ತೆಗೆದು ಪರೀಕ್ಷಾ ಕೊಠಡಿಗೆ ತೆರಳಿ ಪರೀಕ್ಷೆ ಬರೆಯಲಿದ್ದಾರೆ. ಆದರೆ ಖಾಸಗಿ ಶಾಲೆಗಳಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿದ್ದ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಲೂ ಪೊಲೀಸ್ ನಿಯೋಜನೆ ಮಾಡಲಾಗಿದ್ದು, 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Kshetra Samachara
28/03/2022 10:46 am