ಮುಲ್ಕಿ: ರಾಜ್ಯದ್ಯಂತ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಿರಾಳವಾಗಿ ನಡೆದಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ತಾಲೂಕು ವ್ಯಾಪ್ತಿಯ ಕಿನ್ನಿಗೋಳಿ, ಮುಲ್ಕಿಯ ಮೂರು ಪರೀಕ್ಷಾ ಕೇಂದ್ರಗಳಲ್ಲಿ 841 ವಿದ್ಯಾರ್ಥಿಗಳು ಪ್ರಥಮ ದಿನದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದರು.
ಮುಲ್ಕಿ ತಾಲ್ಲೂಕಿನ ಮೂರು ಶಾಲೆಗಳಲ್ಲಿ ಪರೀಕ್ಷಾ ಕೇಂದ್ರವನ್ನು ತೆರೆದಿದ್ದು ಮುಲ್ಕಿಯ ಕಿಲ್ಪಾಡಿ ವ್ಯಾಸ ಮಹರ್ಷಿ ವಿದ್ಯಾಪೀಠ, ನಾರಾಯಣಗುರು ಪದವಿ ಪೂರ್ವ ಕಾಲೇಜು, ಕಿನ್ನಿಗೋಳಿಯ ಮೇರಿವೆಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಪರೀಕ್ಷೆ ನಡೆಸಲಾಗಿದೆ.
ತಾಲೂಕು ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ವಿವಾದ ನಡೆದಿಲ್ಲ. ಮುಲ್ಕಿಯ ಪರೀಕ್ಷಾ ಕೇಂದ್ರ ಬಂದರಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಪರೀಕ್ಷಾ ಮೇಲ್ವಿಚಾರಕರು ತಿಳಿಸಿದ್ದು ವಿದ್ಯಾರ್ಥಿಗಳು ಒಪ್ಪಿಕೊಂಡು ಪರೀಕ್ಷೆ ಬರೆದಿದ್ದಾರೆ.
ತಾಲೂಕು ವ್ಯಾಪ್ತಿಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ, ಅವ್ಯವಹಾರದಲ್ಲಿ ಯಾರು ಭಾಗಿಯಾಗಿಲ್ಲ. ಯಾವುದೇ ವಿದ್ಯಾರ್ಥಿಯು ಡಿಬಾರ್ ಆಗಿಲ್ಲ. ಹಾಗೇ ಯಾವುದೇ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿಲ್ಲ. ತಾಲೂಕು ವ್ಯಾಪ್ತಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಹಾಗೂ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Kshetra Samachara
28/03/2022 08:12 pm