ಮೂಡಬಿದ್ರೆ: ಮೂಡಬಿದ್ರೆ ಸಮೀಪದ ನೀರ್ಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಗಳನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ ಸರಕಾರಿ ಶಾಲೆಯ ಅಭಿವೃದ್ಧಿಗೆ ಸರಕಾರ ಹಾಗೂ ಉದ್ಯಮಿಗಳು ಅನುದಾನಗಳನ್ನು ನೀಡುತ್ತಿದ್ದು ಶಿಕ್ಷಕರು ಮಕ್ಕಳಿಗೆ ಸರಕಾರಿ ಶಿಕ್ಷಣದ ಪ್ರೋತ್ಸಾಹ ನೀಡಲು ಪ್ರಯತ್ನಿಸಬೇಕು ಎಂದರು.
ಈ ಸಂದರ್ಭದಲ್ಲಿ ಸುಮಾರು ವರ್ಷಗಳ ಕಾಲ ನೀರ್ಕೇರೆ ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭ ಸ್ಥಳೀಯ ಗ್ರಾಪಂ ಸದಸ್ಯರು ಅಭಿವೃದ್ಧಿ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
Kshetra Samachara
31/03/2022 06:25 pm