ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರಂಬಾರು:"ಯುವಜನತೆಯಲ್ಲಿ ಇಚ್ಛಾಶಕ್ತಿಯಿದ್ದರೆ ಸಮಾಜದ ಅಭಿವೃದ್ಧಿ": ಉಮಾನಾಥ್ ಕೋಟ್ಯಾನ್

ಸುರತ್ಕಲ್: "ಯುವಜನತೆಯಲ್ಲಿ ಇಚ್ಛಾಶಕ್ತಿ ಮತ್ತು ಸಾಧಿಸುವ ಛಲ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ಒಂದು ಕಾಲದಲ್ಲಿ ಮಕ್ಕಳ ಕೊರತೆಯಿದ್ದ ಕರಂಬಾರು ಸರಕಾರಿ ಶಾಲೆಯಲ್ಲಿ ಈಗ ಮಕ್ಕಳ ಸಂಖ್ಯೆ ಹೆಚ್ಚಳ ಕಂಡಿದೆ. ಊರ ದಾನಿಗಳ ಹಾಗೂ ಶಿಕ್ಷಣ ಪ್ರೇಮಿಗಳ ನೆರವಿನಿಂದ ಇಲ್ಲಿ 1.34 ಕೋಟಿ ರೂ. ವೆಚ್ಚದಲ್ಲಿ ನೂತನ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಇದಕ್ಕೆಲ್ಲ ಶಾಲೆಯ ಅಭಿವೃದ್ಧಿಗೆ ಅವಿರತ ಶ್ರಮಿಸುವ ಹಳೆ ವಿದ್ಯಾರ್ಥಿ ಸಂಘ ಎನ್ನುವ ಯುವಶಕ್ತಿಯೇ ಪ್ರೇರಣೆಯಾಗಿದೆ" ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕರಂಬಾರು ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ಬಜ್ಪೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪೂರ್ಣಕಲಾ ವೈ.ಕೆ.,ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜಾ,ಎ.ವಿ., ಪಿ.ಟಿ. ಕೃಷ್ಣಪ್ಪ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಘವೇಂದ್ರ, ಕದ್ರಿ ಮಂಜುನಾಥ ದೇವಸ್ಥಾನದ ಮೊಕ್ತೇಸರ ಹೆಚ್. ಕೆ. ಪುರುಷೋತ್ತಮ, ಮಳವೂರು ಗ್ರಾ ಪಂ ಮಾಜಿ ಅಧ್ಯಕ್ಷ ಗಣೇಶ್ ಅರ್ಬಿ, ಕರಂಬಾರು ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ಜಗನ್ನಾಥ ಸಾಲ್ಯಾನ್, ಉದ್ಯಮಿ ಕೃಷ್ಣ ಕಲ್ಲೋಡಿ, ವಿಶ್ವನಾಥ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ರಾಕೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ನವೀನ್ ಚಂದ್ರ ಸಾಲ್ಯಾನ್, ಶಾಲೆಯ ಮುಖ್ಯ ಶಿಕ್ಷಕಿ ಉಶಾಕಿರಣ, ಇಬ್ರಾಹಿಂ ಬ್ಯಾರಿ, ಗುತ್ತಿಗೆದಾರ ಮುಹಮ್ಮದ್ ರಫೀಕ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/04/2022 03:08 pm

Cinque Terre

1.6 K

Cinque Terre

0

ಸಂಬಂಧಿತ ಸುದ್ದಿ