ಕಿನ್ನಿಕಂಬಳ: ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರ ವಿಶೇಷ ಪ್ರಯತ್ನ ಮತ್ತು ಶಿಫಾರಸ್ಸಿನಿಂದ ಎಂಆರ್ಪಿಎಲ್ ಸಾಮಾಜಿಕ ಬದ್ಧತಾ ನಿಧಿಯಿಂದ ಕಿನ್ನಿಕಂಬಳದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ನಿರ್ಮಾಣವಾಗಿದ್ದು, ಸುಮಾರು 45 ಲಕ್ಷ ಮೊತ್ತದ ಶಾಲಾ ಕೊಠಡಿಯ ಉದ್ಘಾಟನೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿ ವೈಯವರು ಶನಿವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಎಂಆರ್ಪಿಎಲ್ ಹಿರಿಯ ಪ್ರಬಂಧಕರಾದ ನಾಗರಾಜ್ ರಾವ್, ಕಂದಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಮೂಲ್ಯ, ಸ್ಥಳೀಯ ಪಂಚಾಯತ್ ಸದಸ್ಯರುಗಳು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಅಧ್ಯಕ್ಷರು, ಸರ್ವ ಸದಸ್ಯರು, ಕಿನ್ನಿಕಂಬಳ ವಿದ್ಯಾವರ್ಧಕ ಸಂಘದ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
09/04/2022 04:20 pm