ಮುಲ್ಕಿ:ಕೊಳಚಿಕಂಬಳ ಶ್ರೀ ಜಾರಂದಾಯ ದೈವಸ್ಥಾನದ ವಠಾರದಲ್ಲಿ ಕೊಳಚಿಕಂಬಳ ಗ್ರಾಮ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ವತಿಯಿಂದ ಉಚಿತ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ನಪಂ ಅಧ್ಯಕ್ಷ ಸುಭಾಶ್ ಶೆಟ್ಟಿ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ನೀಡಿ ಪಠ್ಯಪುಸ್ತಕಗಳನ್ನು ಸದುಪಯೋಗಪಡಿಸಿಕೊಂಡು ಜ್ಞಾನಾರ್ಜನೆ ಮೂಲಕ ಕೀರ್ತಿವಂತರಾಗಿ ಎಂದು ಶುಭ ಹಾರೈಸಿದರು
ಮುಖ್ಯ ಅತಿಥಿಗಳಾಗಿ ಮುಲ್ಕಿ ನ. ಪಂ ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯ ಯೋಗೀಶ್ ಕೋಟ್ಯಾನ್, ಕೊಳಚಿಕಂಬಳ ಸಾನದ ಮನೆ ಕೃಷ್ಣ ಆರ್ ಕೋಟ್ಯಾನ್, ಜಾರಂದಾಯ ಸೇವಾ ಸಮಿತಿ ಅಧ್ಯಕ್ಷ ಪ್ರಕಾಶ್ ಸುವರ್ಣ, ಕೋಶಾಧಿಕಾರಿ ರಮಾನಾಥ್ ಸುವರ್ಣ, ಮಹಿಳಾ ಮಂಡಳಿ ಅಧ್ಯಕ್ಷೆ ಲತಾ ಶೇಖರ್, ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ಅಧ್ಯಕ್ಷ ಜೀವನ್ ಕೋಟ್ಯಾನ್, ಕಾರ್ಯದರ್ಶಿ ಕಾರ್ತಿಕ್ ಕೋಟ್ಯಾನ್, ಹೇಮನಾಥ ಕೊಳಚಿಕಂಬಳ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/05/2022 06:55 pm