ನಿಡ್ಡೋಡಿ: ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವನ್ನು ಆಚರಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ ಸಂಗೀತ ಭಾಸ್ಕರ ದೇವಸ್ಯ ರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಮಕ್ಕಳಿಗೆ ಶುಭವನ್ನು ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಕೆ ರಾಘವೇಂದ್ರ ಭಟ್, ಕೈಗಾರಿಕಾ ತರಬೇತಿ ಕಾಲೇಜಿನ ಪ್ರಾಂಶುಪಾಲೆ ಅನುರಾಧಾ ಸಾಲಿಯಾನ್, ಶಾಲಾ ಪ್ರಾಂಶುಪಾಲೆ ದಿವ್ಯ ಎಸ್ ನಾಯಕ್, ಬೋಧಕ ಹಾಗೂ ಬೋಧಕೇತರ ವೃಂದ ಮಕ್ಕಳ ಪಾಲಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
Kshetra Samachara
16/05/2022 02:46 pm