ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಡ್ಡೋಡಿ ಶಾಲಾ ಶಿಕ್ಷಕ ಶಿಕ್ಷಕೇತರರಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಮುಲ್ಕಿ: ಕಿನ್ನಿಗೋಳಿ ಸಮೀಪದ ನಿಡ್ಡೋಡಿ ಜ್ಞಾನರತ್ನ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ (ರಿ) ನ ಅಧೀನಕ್ಕೊಳಪಟ್ಟ ಸಂಸ್ಥೆಯಾದ ಶ್ರೀ ದುರ್ಗಾ ದೇವಿ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು (ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನೆ ಯೋಜನೆ ) ಸಂಯೋಜನೆಯಲ್ಲಿ ಶ್ರೀ ದುರ್ಗಾದೇವಿ ಶಿಕ್ಷಣ ಸಂಸ್ಥೆಯ ಶಿಕ್ಷಕ ಶಿಕ್ಷಕೇತರರಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು.

ಜ್ಞಾನರತ್ನ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಭಾಸ್ಕರ ದೇವಸ್ಯ ಉದ್ಗಾಟಿಸಿದರು ವೇದಿಕೆಯಲ್ಲಿ ಪ್ರಜ್ಞಾ ಸಲಹಾ ಕೇಂದ್ರದ ಸಂಪನ್ಮೂಲ ವ್ಯಕ್ತಿ ಡಾ. ಜಾನ್ ಕ್ಲಾರೆನ್ಸ್ ಮಿರಾಂದ , ಯೋಜನಾ ಸಂಯೋಜಕ ವಿಲಿಯಂ ಸಾಂಎಲ್, ವಲಯ ಸಂಯೋಜಕ ಅಶೋಕ , ಯೋಜನ ಮೌಲ್ಯಮಾಪಕಿ ರೇಷ್ಮಾ, ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಕೆ. ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿ ಡಾ. ಜಾನ್ ಕ್ಲಾರೆನ್ಸ್ ಮಿರಾಂದ ಶಿಕ್ಷಕರಿಗೆ ಹಮ್ಮಿಕೊಳ್ಳಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ ಪರಿಣಾಮಕಾರಿ ಬೋಧನೆಗೆ ಬೇಕಾದ ಕೌಶಲ್ಯಗಳು, ಶಿಕ್ಷಕ ಹಾಗೂ ಮಕ್ಕಳ ನಡುವಿನ ಬಾಂಧವ್ಯ, ಮಕ್ಕಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ, ಮಕ್ಕಳ ಖಿನ್ನತೆ ನಿಬಾಯಿಸುವಲ್ಲಿ ಶಿಕ್ಷಕರ ಪಾತ್ರ, ವಿಷಯಗಳ ಕುರಿತು ಸವಿಸ್ತಾರವಾಗಿ ಸಂವಾದ ನಡೆಸಿ ಮಾರ್ಗದರ್ಶನ ನೀಡಿದರು.

Edited By : PublicNext Desk
Kshetra Samachara

Kshetra Samachara

21/05/2022 01:29 pm

Cinque Terre

1.73 K

Cinque Terre

0

ಸಂಬಂಧಿತ ಸುದ್ದಿ