ಬಜಪೆ:ಸಮಾಜದಲ್ಲಿ ಅಂಧರು ಎಲ್ಲರಂತೆ ಬದುಕಬೇಕು.ಅವರನ್ನು ಸಮಾಜದಲ್ಲಿ ಮುಖ್ಯವಾಹಿನಿಗೆ ತರಬೇಕು ಎಂದು ಮೂಲ್ಕಿಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಹೇಳಿದರು.ಅವರು ಪೆರ್ಮುದೆ ಗ್ರಾಮ ಪಂಚಾಯತ್ ನಲ್ಲಿ ನಿರ್ಮಾಣ ಗೊಂಡ ಬೀಕನ್ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದರು.ಈ ಬಗ್ಗೆ ರಾಜ್ಯ ಸರಕಾರವು ಕಳೆದ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು ಎಂದು ಹೇಳಿದರು.
ಈ ಸಂದರ್ಭ ಪೆರ್ಮುದೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಸಾದ್ ಎನ್ .ಅಂಚನ್ ,ಉಪಾಧ್ಯಕ್ಷೆ ಲೀನಾ ಡಿ ಸೋಜ,ಪಂಚಾಯತ್ ಅಭಿವೃದ್ದಿ ಅಧಿಕಾರಿ ಶೈಲಜಾ,ತಾಲೂಕು ಪಂಚಾಯತ್ ಕಾರ್ಯ ನಿರ್ವಹಣ ಅಧಿಕಾರಿ ನಾಗರಾಜ್ ಎನ್ ,ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ಗಾಯತ್ರಿ,ಪಂಚಾಯತ್ ಸದಸ್ಯರುಗಳು ಹಾಗೂ ಇತರರು ಉಪಸ್ಥಿತರಿದ್ದರು.
Kshetra Samachara
29/05/2022 10:19 pm