ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು: "ಶಿಕ್ಷಣದ ಮೂಲಕ ಪ್ರತಿಭೆ ಅನಾವರಣಗೊಳಿಸಿದ ಪೋಷಕರ ಹಾಗೂ ಶಿಕ್ಷಕರ ಸಾಧನೆ ಅಭಿನಂದನೀಯ"

ಮುಲ್ಕಿ: ಮುಲ್ಕಿ ಸಮೀಪದ ಪಡುಪಣಂಬೂರು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪಡುಪಣಂಬೂರು ಸಮಿತಿ ಸಭೆಯು ಸಮಿತಿಯ ಗೌರವ ಅಧ್ಯಕ್ಷ ಎಂ ದುಗ್ಗಣ್ಣ ಸಾವಂತರ ಉಪಸ್ಥಿತಿಯಲ್ಲಿ, ಅರಮನೆಯ ಧರ್ಮ ಚಾವಡಿಯಲ್ಲಿ ನಡೆಯಿತು.

ಸಭೆಯಲ್ಲಿ 2020-21ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ,ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 85 ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.

ಈ ಸಂದರ್ಭ ದುಗ್ಗಣ್ಣ ಸಾವಂತರು ಮಾತನಾಡಿ ಕಳೆದ ಶೈಕ್ಷಣಿಕ ಅವಧಿಯಲ್ಲಿ ವಿದ್ಯಾರ್ಥಿಗಳ ಸಾಧನೆ ಗಮನಾರ್ಹವಾಗಿದ್ದು ಶಿಕ್ಷಣದ ಮೂಲಕ ಪ್ರತಿಭೆ ಅನಾವರಣಗೊಳಿಸಿದ ಪೋಷಕರ ಹಾಗೂ ಶಿಕ್ಷಕರ ಸಾಧನೆ ಅಭಿನಂದನೀಯ ಎಂದರು.

ಸಮಿತಿ ಅಧ್ಯಕ್ಷ ನವೀನ್ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು

ಸಭೆಯಲ್ಲಿ ಕಳೆದ ತಿಂಗಳಲ್ಲಿ ನಡೆದ ವಾರ್ಷಿಕ ಪೂಜಾ ಸಮಿತಿ ಆಯವ್ಯಯ ದ ವಿವರವನ್ನು ಸಮಿತಿ ಕೋಶಾಧಿಕಾರಿ ದಾಮೋದರ್ ಸಾಲ್ಯಾನ್ ಮಂಡಿಸಿದರು. ಗೌತಮ್ ಜೈನ್ ಮುಲ್ಕಿ ಅರಮನೆ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/05/2022 02:15 pm

Cinque Terre

1.56 K

Cinque Terre

0

ಸಂಬಂಧಿತ ಸುದ್ದಿ