ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: "ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಕಾಲೇಜಿನ ಅಭಿವೃದ್ಧಿಗೆ ಶ್ರಮ ಶ್ಲಾಘನೀಯ"

ಮುಲ್ಕಿ: ಕಿನ್ನಿಗೋಳಿ ಸಮೀಪದ ಪೊಂಪೈ ಕಾಲೇಜು ಐಕಳದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ ವಯೋನಿವೃತ್ತಿ ಹೊಂದಿದ ಪ್ರೊ. ಯೋಗೀಂದ್ರ ಬಿ ರವರ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಸಂಚಾಲಕರಾದ ರೆ. ಫಾ. ಓಸ್ವಾಲ್ಡ್ ಮೊಂತೆರೊ ಮಾತನಾಡಿ ಪ್ರೊ. ಯೋಗೀಂದ್ರರವರು ಒಬ್ಬ ಉತ್ತಮ ಉಪನ್ಯಾಸಕರಾಗಿದ್ದುಕೊಂಡು ಕಾಲೇಜಿನ ಬೆಳವಣಿಗೆಗೆ ಶ್ರಮಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮಹತ್ವ ನೀಡಿದ್ದರು ಎಂದರು.

ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಸೇಕ್ರೆಡ್ ಹಾರ್ಟ ಕಾಲೇಜುನ ಪ್ರಾಧ್ಯಾಪಕರಾದ ಪ್ರೊ. ಜೆ.ಬಿ.ಡಿಸೋಜ ರವರು ಯೋಗೀಂದ್ರ ಬಿ ರವರ ವೃತ್ತಿ ಜೀವನದ ಸಾಧನೆಗಳನ್ನು ನೆನಪಿಸಿಕೊಂಡರು.

ಕಾರ್ಯಕ್ರಮದಲ್ಲಿ  ಸಂತ ಎಲೋಶಿಯಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರೂ, ಖ್ಯಾತ ಸಮಾಜಶಾಸ್ತ್ರಜ್ಞರಾದ ಡಾ. ರಿಚರ್ಡ ಪಾಯಸ್, ಆಡಳಿತ ಮಂಡಳಿಯ ಸದಸ್ಯರಾಗಿರುವ ವಂ. ಫಾ| ಸುನಿಲ್ ಜಾರ್ಜ್ ಡಿಸೋಜ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ|| ಪುರುಷೋತ್ತಮ ಕೆ.ವಿ., ಸ್ವಾಗತಿಸಿ,  ಡಾ.ಮಂಜುನಾಥ್ ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕಿ ಸಿಲ್ವಿಯಾ ಪಾಯಸ್ ಕಾರ‍್ಯಕ್ರಮವನ್ನು ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

02/06/2022 12:34 pm

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ