ಮುಲ್ಕಿ: ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಒಂದು ಅತ್ಯುತ್ತಮ ಸೇವೆ, ಕರ್ನೀರೆ ವಿಶ್ವನಾಥ ಶೆಟ್ಟರು ಕಳೆದ 25 ವರ್ಷಗಳಿಂದ ಶಿಕ್ಷಣಕ್ಕೆ ಸಹಕಾರ ನೀಡಿರುವುದು ಅಭಿನಂದನೀಯ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು,
ಅವರು ದ.ಕ.ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಕರ್ನೀರೆಯಲ್ಲಿ ಉದ್ಯಮಿ ಕರ್ನೀರೆ ವಿಶ್ವನಾಥ ಶೆಟ್ಟಿಯವರು ಕಳೆದ 24 ವರ್ಷಗಳಿಂದ ನಡೆಯುವ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿಮಾತನಾಡಿ ಸರಕಾರಿ ಶಾಲೆಗಳು ಮುಚ್ಚುವ ಪರೀಸ್ಥಿತಿಯಲ್ಲಿದ್ದರೂ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರಣ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದರು.
ದಾನಿಗಳಾದ ಕರ್ನೀರೆ ವಿಶ್ವನಾಥ ಶೆಟ್ಟಿ ಮಾತನಾಡಿ ನಾನು ಕಲಿತ ಶಾಲೆ ನನಗೆ ಸೇವೆ ಮಾಡುವ ಅವಕಾಶ ಸಿಕ್ಕಿದೆ, ನಾನು ಅಂದಿನ ದಿನಗಳಲ್ಲಿ ನಾನು ಶಿಕ್ಷಣಕ್ಕೆ ಕಷ್ಟ ಪಟ್ಟಿದ್ದೆ, ಅಂದಿನ ಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ, ಮಕ್ಕಳು ಉತ್ತಮ ಶಿಕ್ಷಣ ಪಡೆಯಿರಿ ನಿಮ್ಮ ಮುಂದಿನ ಶಿಕ್ಷಣಕ್ಕೂ ಸಹಾಯ ಮಾಡುತ್ತೇವೆ ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂದರು.
ಈ ಸಂದರ್ಭ ಉದ್ಯಮಿ ವಿರಾರ್ ಶಂಕರ ಶೆಟ್ಟಿ, ಉದ್ಯಮಿ ಅಶ್ರಪ್ , ಕರ್ನಿರೆ ಹರಿಶ್ಚಂದ್ರ ಶೆಟ್ಟಿ, ಜೀವನ್ ಶೆಟ್ಟಿ ಮೂಲ್ಕಿ, ರವಿರಾಜ್ ಶೆಟ್ಟಿ ಜತ್ತೊಟ್ಟು, ಪ್ರಭಾಕರ ಶೆಟ್ಟಿ, ಸುರೇಶ್ ಶೆಟ್ಟಿ, ಗ್ರಾ.ಮ ಸದಸ್ಯ ಪ್ರಶಾಂತ್ ಶೆಟ್ಟಿ, ವನಜ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಹೇಮಲತಾ, ಉಪಾಧ್ಯಕ್ಷ ಉಮೇಶ್ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಜ್ಯುಲೆಟ್ ಲೂವಿಸ್ ಸ್ವಾಗತಿಸಿ, ಶಿಕ್ಷಕ ಸಂತೋಷ್ ನಿರೂಪಿಸಿದರು.
Kshetra Samachara
02/06/2022 12:55 pm