ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚೇಳೈರು: ವಿದ್ಯಾದಾನಕ್ಕೆ ಸಹಾಯ ಮಾಡುವ ದಾನಿಗಳ ಹೃದಯ ಶ್ರೀಮಂತಿಕೆ ಶ್ಲಾಘನೀಯ

ಸುರತ್ಕಲ್:ದಾನಗಳಲ್ಲಿ ಶ್ರೇಷ್ಠವಾದ ದಾನ ವಿದ್ಯಾದಾನ ಅಂತಹ ಶ್ರೇಷ್ಠವಾದ ಕೆಲಸಕ್ಕೆ ಸಹಾಯ ಮಾಡುವ ದಾನಿಗಳ ಹೃದಯ ಶ್ರೀಮಂತಿಕೆ ಬಹಳ ದೊಡ್ಡದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ! ಕುಮಾರ್ ಹೇಳಿದರು ಅವರು ಮಧ್ಯ ದಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ವತಿಯಿಂದ ಮುಂಬಯಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ರವರ ಸಹಕಾರದಲ್ಲಿ ಕೊಡಮಾಡಿದ 4 ನೇ ಬಸ್ ಹಸ್ತಾಂತರ ಮಾಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇಳೈರು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದ ವಹಿಸಿದ್ದರು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮುಂಬಯಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಮಾತನಾಡಿದರು.

ತಾ ಪಂ ಕಾರ್ಯ ನಿರ್ವಹಕ ಅಧಿಕಾರಿ ಎನ್ ಜಿ ನಾಗರಾಜ್,ಚೇಳೈರು ಗ್ರಾ ಪಂ ಅಭಿವೃದ್ಧಿ ಅಧಿಕಾರಿ ನಿತ್ಯಾನಂದ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಭಗವಾನ್, ಶಿಕ್ಷಣ ಇಲಾಖೆ ಅಧಿಕಾರಿ ಹರಿಪ್ರಸಾದ್ ಶೆಟ್ಟಿ, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್, ಸದಸ್ಯರಾದ ವಿಠಲ ಶೆಟ್ಟಿ, ವಜ್ರಾಕ್ಷಿ ಪಿ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಕುಸುಮಾ,ಶಿಕ್ಷಕರಾದ ಹರೀಶ್,ಶೋಭಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ದೇವಾಡಿಗ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/06/2022 03:57 pm

Cinque Terre

1.43 K

Cinque Terre

0

ಸಂಬಂಧಿತ ಸುದ್ದಿ