ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಕುಂಜೆ:ಸಂತ ಪೌಲರ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ

ಮುಲ್ಕಿ: ಮುಲ್ಕಿ ಸಮೀಪದ ಬಳ್ಕುಂಜೆ ಸಂತ ಪೌಲರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಭೆಯಲ್ಲಿ ಬಳ್ಕುಂಜೆ ಗುತ್ತು ದಿ| ಜಲಜ ಸುಂದರ ಶೆಟ್ಟಿ ಸ್ಮರಣಾರ್ಥ ದಾನಿಗಳ ನೆಲೆಯಲ್ಲಿ ಕರುಣಾಕರ ಶೆಟ್ಟಿಯವರು ಸಮವಸ್ತ್ರವನ್ನು ಮಕ್ಕಳಿಗೆ ನೀಡಿದರು.

ಈ ಸಂದರ್ಭ ಶಾಲಾ ಸಂಚಾಲಕ ಫಾ| ಗಿಲ್ಬರ್ಟ್ ಡಿ ಸೋಜ ಮಾತನಾಡಿ ಮಕ್ಕಳು ದಾನಿಗಳು ನೀಡಿದ ಸೌಕರ್ಯಗಳನ್ನು ಉಪಯೋಗಿಸಿಕೊಂಡು ಉತ್ತಮ ವಿದ್ಯಾವಂತರಾಗಿ ಎಂದು ಶುಭ ಹಾರೈಸಿದರು.

ಶಾಲಾ ಮುಖ್ಯ ಶಿಕ್ಷಕ ಸುಕುಮಾರ್. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಉದಯ ರಾವ್, ಶಾಲಾ ಮೇಲುಸ್ತುವಾರಿ ಅಧ್ಯಕ್ಷ ದಿನಕರ ಶೆಟ್ಟಿ, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/06/2022 02:20 pm

Cinque Terre

1.71 K

Cinque Terre

0

ಸಂಬಂಧಿತ ಸುದ್ದಿ