ಮುಲ್ಕಿ : ಮಕ್ಕಳಿಗೆ ಕನ್ನಡ ಮತ್ತು ಸಾಹಿತ್ಯದ ಬಗ್ಗೆ ಒಲವು ಆಸಕ್ತಿ ಮೂಡಲು ಶಿಶು ಕಾವ್ಯ ಮತ್ತು ಕಥೆಗಳನ್ನು ಪರಿಚಯಿಸುವ ಅಗತ್ಯವಿದೆ. ಶಾಲೆಗಳಲ್ಲಿ ಸಾಹಿತ್ಯಾಸಕ್ತಿ ಮೂಡಿಸಿ ಆ ಮೂಲಕ ಕನ್ನಡ ಭಾಷೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯೀಶ್ ಚೌಟ ಹೇಳಿದರು.
ಅವರು ಕಿನ್ನಿಗೋಳಿ ಸಮೀಪದ ನಡುಗೋಡು ದ.ಕ.ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮುಲ್ಕಿ ತಾಲೂಕು ಘಟಕದಿಂದ ನಡೆದ ಮಕ್ಕಳ ಕಾವ್ಯ ಕಲರವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಘಟಕದ ಕೋಶಾಧಿಕಾರಿ ಸ್ವರಾಜ್ ಶೆಟ್ಟಿ, ನಿವೃತ್ತ ಶಿಕ್ಷಕಿ ಸುಮತಿ ಅನಂತರಾಮ ಭಟ್, ಎಸ್.ಡಿ.ಎಂ ಸಿ ಅಧ್ಯಕ್ಷೆ ಮಲ್ಕಿಕಾ ಪ್ರಕಾಶ್ ಆಚಾರ್ಯ, ಉಪಾಧ್ಯಕ್ಷ ಮದ್ದು, ಮುಖ್ಯೋಪದ್ಯಾಯನಿ ದುಲ್ಸಿನ್ ಡಿಸೋಜ ಉಪಸ್ಥಿತರಿದ್ದರು. ಮುಲ್ಕಿ ಘಟಕದ ಅಧ್ಯಕ್ಷೆ ಗಾಯತ್ರಿ ಉಡುಪ ಮಕ್ಕಳಿಗೆ ಕನ್ನಡ ಕವಿಗಳ ಶಿಶುಗೀತೆಗಳನ್ನು ಅಭಿನಯ ಸಹಿತ ಕಲಿಸಿಕೊಟ್ಟರು. ಐರಿನ್ ಡಿಸೋಜ ಸ್ವಾಗತಿಸಿದರು. ಶಿಕ್ಷಕಿ ಪ್ರಮೀಳಾ ನಿರೂಪಿಸಿದರು.
Kshetra Samachara
12/07/2022 09:59 pm