ಮುಲ್ಕಿ: ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ "ಓದುವ ಬೆಳಕು" ಕಾರ್ಯಕ್ರಮದ ಅಂಗವಾಗಿ "ಅಮ್ಮನಿಗಾಗಿ ಒಂದು ಪುಸ್ತಕ ಅಭಿಯಾನ" ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿದರು
ಸಂಪನ್ಮೂಲ ವ್ಯಕ್ತಿ ಕೆ.ಪಿ.ಎಸ್ ಕೆ ಸ್ಮಾರಕ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ನಾಗಭೂಷಣ್ ರಾವ್ ರವರು ಮಕ್ಕಳಿಗೆ ಪುಸ್ತಕದ ಮಹತ್ವದ ಕುರಿತು ಮಾಹಿತಿ ನೀಡಿದರು.
ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಶಾಲಾ ಮಕ್ಕಳು ಮತ್ತು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
Kshetra Samachara
10/10/2022 05:42 pm