ಮಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ, ತಂಬಾಕು ಉತ್ಪನ್ನ ಜಗಿದು ಉಗಿಯುವುದು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದು ಇದನ್ನು ಉಲ್ಲಂಘನೆ ಮಾಡಿದವರಿಗೆ 200 ರೂ. ದಂಡ ವಿಧಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಪಾನ್ ಮಸಾಲ ಜಗಿದು ಉಗುಳುವುದರಿಂದ ಕೋವಿಡ್-19 ಹಾಗೂ ಇತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇದನ್ನು ನಿಷೇಧಿಸಿದ್ದು, ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಚಂದ್ರ ಬಾಯರಿ, ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್, ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ. ಸದಾಶಿವ ಶಾನ್ ಭಾಗ್, ಜಿಲ್ಲಾ ಸರ್ವೇಕ್ಷಣೆ ಘಟಕದ ಜಿಲ್ಲಾ ಕಾರ್ಯ ಕ್ರಮಾಧಿಕಾರಿ ಡಾ. ಜಗದೀಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
10/12/2020 09:03 pm