ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಕಡತ ವಿಲೇವಾರಿಯಲ್ಲಿ ವಿಳಂಬ ನೀತಿ ಸಲ್ಲದು; ಉಪಲೋಕಾಯುಕ್ತ

ಬಂಟ್ವಾಳ: ವಿಳಂಬ ನೀತಿ ಅನುಸರಿಸದೆ ಕಡತ ವಿಲೇವಾರಿ ಶೀಘ್ರ ಮಾಡಬೇಕು ಎಂದು ತಾಲೂಕು ಕಚೇರಿಗೆ ಸೂಚಿಸಿದ್ದಾಗಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.

ಬಿ.ಸಿ.ರೋಡಿನ ಬಂಟ್ವಾಳ ತಾಲೂಕು ಕಚೇರಿಗೆ ಗುರುವಾರ ಭೇಟಿ ನೀಡಿದ ಅವರು, ಕಡತ ಪರಿಶೀಲನೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿವಿಧ ಕಾರಣಗಳಿಂದ ವಿಲೇವಾರಿಯಾಗದೆ ಬಾಕಿಯುಳಿದಿರುವ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಿ, ಪ್ರತಿ 15 ದಿನಗಳಿಗೊಮ್ಮೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಸರ್ಕಾರಿ ಜಮೀನು ಅತಿಕ್ರಮಣ ಹಾಗೂ ಅಕ್ರಮ ಕೋರೆಗಳ ಕುರಿತಾಗಿ ಬಂದಿರುವ ದೂರುಗಳ ಕುರಿತಾಗಿ ಲೋಕಾಯುಕ್ತ ಇನ್ ಸ್ಪೆಕ್ಟರ್ ಹಾಗೂ ತಹಸೀಲ್ದಾರ್ ಜಂಟಿಯಾಗಿ ಸ್ಥಳ ತನಿಖೆ ಮಾಡಬೇಕು, ವಿಲೇವಾರಿಯಾಗದೆ ಉಳಿದಿರುವ ಕಡತಗಳ ಕುರಿತಾಗಿ ಕಾರಣ ಸಹಿತ ಸಮಗ್ರ ಮಾಹಿತಿ ನೀಡುವಂತೆ ತಹಸೀಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿರುವುದಾಗಿ ತಿಳಿಸಿದ ಅವರು, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಡತಗಳ ಪರಿಶೀಲನೆ ಹಾಗೂ ದೂರು ಅರ್ಜಿಗಳ ವಿಚಾರಣೆ ನಡೆಸಲಾಗಿದೆ ಎಂದರು.

ಲೋಕಾಯುಕ್ತ ಎಸ್ಪಿ ಕುಮಾರಸ್ವಾಮಿ, ಡಿ.ವೈ.ಎಸ್ಪಿ. ವಿಜಯಪ್ರಕಾಶ್, ಲೋಕಾಯುಕ್ತ ಇನ್ ಸ್ಪೆಕ್ಟರ್ ಅಮಾನುಲ್ಲಾ ಖಾನ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಮೊದಲಾದವರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

17/12/2020 08:44 pm

Cinque Terre

14.22 K

Cinque Terre

0

ಸಂಬಂಧಿತ ಸುದ್ದಿ