ನಗರದ ಮೆಸ್ಕಾಂ ಇಲಾಖೆಯ ಎಇಇ ಸಹಾಯಕ ಕಾರ್ಯಪಾಲಕ ಅಭಿಯಂತರ ನಿವಾಸ ಹಾಗೂ ಕಚೇರಿ ಮೇಲೆ ಇಂದು ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆದಿದೆ.
ಮೆಸ್ಕಾಂ ಇಲಾಖೆಯ ಎಇಇ ಸಹಾಯಕ ಕಾರ್ಯಪಾಲಕ ಅಭಿಯಂತರ ದಯಾಲು ಸುಂದರ್ ರಾಜ್ ರ ಮಲ್ಲಿಕಟ್ಟೆಯಲ್ಲಿರುವ ವಿಜಯ ಅಪಾರ್ಟ್‌ಮೆಂಟ್ ನಲ್ಲಿರುವ 102 ನಂಬರ್ ಬಾಡಿಗೆ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಕದ್ರಿಕಂಬಳದಲ್ಲಿ ಸ್ವಂತ ಮನೆಯಿದ್ದರೂ ದಯಾಲು ಸುಂದರ್ ರಾಜ್ ಈ ಅಪಾರ್ಟ್ ಮೆಂಟ್ ನಲ್ಲಿ ಬಾಡಿಗೆಗೆ ವಾಸವಾಗಿದ್ದಾರೆ. ಮಂಗಳೂರು ಎಸಿಬಿ ಎಸ್ಪಿ ಸಿ.ಎ.ಸೈಮನ್ ತಂಡ ಮತ್ತು ಕಾರವಾರ ಎಸಿಬಿ ತಂಡ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದೆ.
ಎಸಿಬಿ ಅಧಿಕಾರಿಗಳು ಮನೆ ಹಾಗೂ ಕಚೇರಿಗೆ ದಾಳಿ ನಡೆಸಿ ಕಡತಗಳು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದಲೂ ಅವರು ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಗಳೂರು ಮೆಸ್ಕಾಂ ಕಚೇರಿಯಲ್ಲಿ ಎಸಿಬಿ ದಾಳಿ ವೇಳೆ ಎಇಇ ದಯಾಲು ಸುಂದರ್ ರಾಜ್ ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.
Kshetra Samachara
16/03/2022 11:08 am