ಮಳಲಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆಗೆ ಧಕ್ಕೆಗೆ ಆಸ್ಪದ ನೀಡುವುದಿಲ್ಲವೆಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಹೇಳಿದ್ದಾರೆ.
ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿರುವ ಅಲೋಕ್ ಕುಮಾರ್ ಇಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅದಕ್ಕಿಂತ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಮಳಲಿ ಮಸೀದಿ ವಿವಾದ ಪ್ರಕರಣ ಸದ್ಯ ನ್ಯಾಯಾಲಯದಲ್ಲಿದ್ದು, ಸದ್ಯ ಜೂನ್ 3ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಆ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಮಂಗಳೂರು ಒಂದು ಸೂಕ್ಷ್ಮ ಪ್ರದೇಶವಾಗಿದ್ದು, ಇನ್ನೊಂದು ವರ್ಷದಲ್ಲಿ ಚುನಾವಣೆಯಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಸೈಬರ್ ಅಪರಾಧಗಳು ಅಧಿಕವಾಗುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗಿದೆ. ಮಂಗಳೂರು ಪೋಲಿಸರು ಅಗತ್ಯ ಕ್ರಮ ವಹಿಸಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜೊತೆಗೆ ಕರಾವಳಿಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಅಲೋಕ್ ಕುಮಾರ್ ಎಂದು ಹೇಳಿದರು.
Kshetra Samachara
26/05/2022 05:34 pm