ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನ್ಯೂ ಇಯರ್ ಸಂಭ್ರಮಕ್ಕೆ ಬೀಚ್ ಪ್ರವೇಶ ನಿಷೇಧ

ಮಂಗಳೂರು: ಕೊರೊನಾ ರೂಪಾಂತರದ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೀಚ್‌ಗೆ ಸಾರ್ವಜನಿಕರಿಗೆ ತೆರಳದಂತೆ ನಿಷೇಧಾಜ್ಞೆ ಹೇರಲಾಗಿದೆ.

ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೊಸ ವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯರು ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

29/12/2020 08:59 pm

Cinque Terre

9.27 K

Cinque Terre

0

ಸಂಬಂಧಿತ ಸುದ್ದಿ