ಮಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಯಾವುದೇ ಹೋಟೆಲ್, ಲಾಡ್ಜ್, ರೆಸಾರ್ಟ್ ಗಳಲ್ಲಿರುವ ಈಜುಕೊಳಗಳನ್ನು ಗ್ರಾಹಕರಿಗೆ ಅಥವಾ ಸಾರ್ವಜನಿಕರಿಗೆ ಬಳಸಲು ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಆದರೆ, ಕಂಟೈನ್ ಮೆಂಟ್ ವಲಯದ ಹೊರಗೆ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶಕ್ಕಾಗಿ ಮಾತ್ರವೇ ಇರುವ ಈಜುಕೊಳ ತೆರೆಯಲು ಹಾಗೂ ಬಳಕೆ ಮಾಡಲು ಅವಕಾಶವಿರುತ್ತದೆ. ಇದನ್ನು ಹೊರತುಪಡಿಸಿ ಯಾವುದೇ ಈಜುಕೊಳಗಳನ್ನು ಬಳಸುವಂತಿಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ.
ಕೊರೊನಾ ಸೋಂಕು ಹರಡುವು ದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಯಾವುದೇ ಈಜುಕೊಳ ಪ್ರಾರಂಭಿಸಲು ಜಿಲ್ಲಾಡಳಿತದ ಪೂರ್ವಾನುಮೋದನೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ಯಾರಾದರೂ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂಥವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020ರ ಅನ್ವಯ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
Kshetra Samachara
01/01/2021 09:33 pm