ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೇರಳದಿಂದ ದ.ಕ. ಜಿಲ್ಲೆಗೆ ಕೋಳಿ ಸಾಗಾಟಕ್ಕೆ ನಿರ್ಬಂಧ; ಜಿಲ್ಲಾಧಿಕಾರಿ

ಮಂಗಳೂರು: ಕೇರಳದಿಂದ ದ.ಕ. ಜಿಲ್ಲೆಗೆ ಬರುವ ಎಲ್ಲ ರೀತಿಯ ಕೋಳಿ ಹಾಗೂ ಕೋಳಿಯ ಉತ್ಪನ್ನ ಸಾಗಾಟ ನಿರ್ಬಂಧಿಸಬೇಕು. ಅಲ್ಲದೆ, ಕೇರಳ ರಾಜ್ಯಕ್ಕೆ ಜಿಲ್ಲೆಯಿಂದ ರವಾನಿಸುವ ಕೋಳಿ ಹಾಗೂ ಉತ್ಪನ್ನಗಳ ವಾಹನಗಳಿಗೆ ಗಡಿಭಾಗಗಳಲ್ಲಿ ನಂಜು ನಾಶಕ ಔಷಧಿ ಸಿಂಪಡಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ಕೋಳಿಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋಳಿ ಶೀತ ಜ್ವರದ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ರೋಗ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕೇರಳದ ಕೊಟ್ಟಾಯಂ ಮತ್ತು ಅಲಪುಳಂ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ ಹಕ್ಕಿಜ್ವರ ಸೋಂಕು ದೃಢಪಟ್ಟಿದೆ. ಆದ್ದರಿಂದ ದ.ಕ. ಜಿಲ್ಲೆಯಲ್ಲಿಯೂ ಈ ರೋಗ ಹರಡುವ ಸಾಧ್ಯತೆ ಇದ್ದು, ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲಕರು ಅಗತ್ಯ ಕ್ರಮ ವಹಿಸುವುದರ ಜೊತೆಗೆ ಅನಗತ್ಯವಾಗಿ ಜನರ ಓಡಾಟ ನಿರ್ಬಂಧಿಸಬೇಕು. ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿ ಜ್ವರ ಲಕ್ಷಣ ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

Edited By : Nagaraj Tulugeri
Kshetra Samachara

Kshetra Samachara

07/01/2021 09:42 pm

Cinque Terre

12.59 K

Cinque Terre

1

ಸಂಬಂಧಿತ ಸುದ್ದಿ