ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 220 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,959ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 391 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 23,804ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಐವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 624ಕ್ಕೆ ಏರಿಕೆಯಾಗಿದೆ.
Kshetra Samachara
16/10/2020 07:35 pm