ಮಂಗಳೂರು: ಯೆಯ್ಯಾಡಿ ಕೊಂಚಾಡಿಯಲ್ಲಿ ಖಾಸಗಿ ವಸತಿ ಸಮುಚ್ಚಯದ ಇಂಗುಗುಂಡಿ ಭರ್ತಿಯಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಬಗ್ಗೆ 3 ವರ್ಷಗಳಿಂದ ದೂರು ನೀಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಗರ ಆಡಳಿತ ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ರವಿವಾರ ಪ್ರತಿಭಟನೆ ಸಭೆ ನಡೆಸಿದರು.
ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದರು. ದಯಾನಂದ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು.
ರೈತ ಮುಖಂಡ ಯಾದವ ಶೆಟ್ಟಿ, ಸಿಪಿಎಂ ಉತ್ತರ ಕಾರ್ಯದರ್ಶಿ ದಯಾನಂದ ಶೆಟ್ಟಿ, ದಲಿತ ಹಕ್ಕುಗಳ ಸಮಿತಿಯ ತಿಮ್ಮಯ ಕೊಂಚಾಡಿ, ಕಟ್ಟಡ ಕಾರ್ಮಿಕ ಸಂಘಟನೆಯ ರವಿಚಂದ್ರ ಕೆ., ಉಮೇಶ್ ಕೊಪ್ಪಲಕಾಡು ಮೊದಲಾದವರು ಉಪಸ್ಥಿತರಿದ್ದರು.
Kshetra Samachara
19/10/2020 12:14 pm