ಬಂಟ್ವಾಳ: ಪುರಸಭೆ ಬಂಟ್ವಾಳ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ಆಶ್ರಯದಲ್ಲಿ ಹ್ಯುಮ್ಯಾನಿಟಿ ಕ್ಲಬ್ ಬಂಟ್ವಾಳ ಸಹಯೋಗದೊಂದಿಗೆ ಕೋವಿಡ್ ಪರೀಕ್ಷೆ ಹಾಗೂ ಆರೋಗ್ಯ ತಪಾಸಣೆ ಶಿಬಿರ ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ನಡೆಯಿತು.
ಪುರಸಭೆ ಸದಸ್ಯ ಗೋವಿಂದ ಪ್ರಭು ಉದ್ಘಾಟಿಸಿದರು. ಬಂಟ್ವಾಳ ನಗರ.ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಸದಾಶಿವ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಎ.ಜೆ. ಆಸ್ಪತ್ರೆಯ ತಜ್ಞ ವೈದ್ಯ ಡಾ. ಜಮೀಲ್ ಉಮ್ಮರ್ ಕೋವಿಡ್ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಉಪಸ್ಥಿತರಿದ್ದರು. ಹ್ಯುಮ್ಯಾನಿಟಿ ಟ್ರಸ್ಟಿ ಪ್ರಶಾಂತ್ ಫ್ರಾಂಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕ್ಲಬ್ ಸದಸ್ಯ ಸಂದೀಪ್ ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಹ್ಯುಮ್ಯಾನಿಟಿ ಕ್ಲಬ್ ಸದಸ್ಯರು ಸಹಕರಿಸಿದರು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆದ ಶಿಬಿರದಲ್ಲಿ 82 ಮಂದಿ ಕೋವಿಡ್ ಪರೀಕ್ಷೆಗೊಳಗಾದರು.
Kshetra Samachara
20/10/2020 09:28 pm