ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: "ಕೊರೊನಾ ಹಾವಳಿಯ ಈ ದಿನಗಳಲ್ಲಿ ಇರಲಿ ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿ, ಕಳಕಳಿ"

ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿ ಬೆಟ್ಟು ಗ್ರಾಪಂ ಸಭಾಂಗಣದಲ್ಲಿ ಅತಿಕಾರಿ ಬೆಟ್ಟು ಗ್ರಾಪಂ ಮತ್ತು ಪ್ರಜ್ಞಾ ಸಲಹಾ ಕೇಂದ್ರ ಮಂಗಳೂರು ಸಹಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರಿಗೆ ಪಂಚಾಯತ್ ಕಾವಲು ಸಮಿತಿಯ ಪಾತ್ರ ಮತ್ತು ಜವಾಬ್ದಾರಿ ಬಗ್ಗೆ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಿತು.

ಪಿಡಿಒ ರವಿ ಗ್ರಾಪಂ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಕೊರೊನಾ ದಿನಗಳಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಎಚ್ಚರಿಕೆ ಜೊತೆಗೆ ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳ ಬಗ್ಗೆ ಕ್ರಮ ಕೈಗೊಳ್ಳಲು ಇಲಾಖೆ ಸದಾ ಸಿದ್ಧವಾಗಿದೆ ಎಂದರು.

ಪ್ರಜ್ಞಾ ಸಲಹಾ ಕೇಂದ್ರದ ಯೋಜನಾ ಸಂಯೋಜಕ ಅಶೋಕ್, ವಿಲಿಯಂ ಸ್ಯಾಮ್ಯುಯೆಲ್ ಮತ್ತು ಪ್ರಜ್ಞಾ ಸಲಹಾ ಕೇಂದ್ರದ ಆಪ್ತ ಸಮಾಲೋಚಕರಾದ ಪವಿತ್ರಾಕ್ಷಿ ಅವರು ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಪಾತ್ರ ಮತ್ತು ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು.

ಅತಿಕಾರಿ ಬೆಟ್ಟು ಗ್ರಾಪಂ ಮಾಜಿ ಅಧ್ಯಕ್ಷೆ ಶಾರದಾ ವಸಂತ್, ಗ್ರಾಮ ಕರಣಿಕರಾದ ಸುನಿಲ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕರಾದ ಸುಲೋಚನಾ ಹಾಗೂ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸದಸ್ಯರು, ಪ್ರಜ್ಞಾ ಸಲಹಾ ಕೇಂದ್ರ ಸಿಬ್ಬಂದಿ, ಗ್ರಾಮಸ್ಥರು ಮತ್ತು ಗ್ರಾಪಂ ಸಿಬ್ಬಂದಿ ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

23/10/2020 09:45 am

Cinque Terre

6.73 K

Cinque Terre

0

ಸಂಬಂಧಿತ ಸುದ್ದಿ