ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಿಲಾದುನ್ನಬಿ ಆಚರಣೆ: ಕೋವಿಡ್-19 ಮುಂಜಾಗರೂಕತಾ ಕ್ರಮ ಕಟ್ಟುನಿಟ್ಟಿನ ಪಾಲನೆಗೆ ಡಿ.ಸಿ. ಸೂಚನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅ.29ರಂದು ಮಿಲಾದುನ್ನಬಿ ಹಬ್ಬ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಮುಂಜಾಗರೂಕತಾ ಕ್ರಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮಿಲಾದುನ್ನಬಿ ಹಬ್ಬದ ಸಂದರ್ಭ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಯಾವುದೇ ರೀತಿಯ ಹಗಲು ಅಥವಾ ರಾತ್ರಿಯ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮ ಮಾಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವುದು, ಕಬರ್ ಸ್ಥಾನ ಸಹಿತ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮಾಡುವುದಕ್ಕೆ ಅನುಮತಿ ಇಲ್ಲ.

ಮಿಲಾದುನ್ನಬಿ ಹಬ್ಬದ ದಿನ ಮಸೀದಿ, ದರ್ಗಾಗಳಲ್ಲಿ ಸುರಕ್ಷಿತ ಅಂತರ ಕಾಪಾಡಿಕೊಂಡು ಮಾಸ್ಕ್‌ ಕಡ್ಡಾಯವಾಗಿ ಉಪಯೋಗಿಸುವುದು.

60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷದ ಒಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

ಸೋಪಿನೊಂದಿಗೆ ಕೈ ತೊಳೆಯಲು ಮತ್ತು ಸ್ಯಾನಿಟೈಸರ್‌ನ್ನು ಮಸೀದಿ, ದರ್ಗಾದ ಪ್ರವೇಶ ದ್ವಾರದಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕೆಂದು ಅವರು ತಿಳಿಸಿದ್ದಾರೆ.

ಆದೇಶಕ್ಕೆ ವ್ಯತಿರಿಕ್ತವಾಗಿ ಯಾರಾದರೂ ನಡೆದುಕೊಂಡರೆ ಕಾನೂನು ರೀತಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

24/10/2020 10:44 pm

Cinque Terre

6.75 K

Cinque Terre

0

ಸಂಬಂಧಿತ ಸುದ್ದಿ