ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 139 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,540ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 211 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 26,335ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಮೂವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 663ಕ್ಕೆ ಏರಿಕೆಯಾಗಿದೆ.
Kshetra Samachara
25/10/2020 07:18 pm