ಮಂಗಳೂರು: ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡುವವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪೌಷ್ಟಿಕಾಂಶ ಭತ್ತೆಯ ರೂಪದಲ್ಲಿ 5,000 ರೂ. ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ.
ಕೊರೊನಾ ಸೋಂಕಿನಿಂದ ಗುಣಮುಖರಾಗಿ ಸ್ವ-ಇಚ್ಛೆಯಿಂದ ಪ್ಲಾಸ್ಮಾ ದಾನ ಮಾಡುವವರಿಗೆ ಪೌಷ್ಟಿಕಾಂಶದ ಭತ್ತೆ ಎಂದು ಇಲಾಖೆಯ ವತಿಯಿಂದ ಧನ ಸಹಾಯ ನೀಡಲಾಗುವುದು. ಖಾಸಗಿ ಪ್ರಯೋಗಾಲಯದಲ್ಲಿ ದಾನಿಗಳಿಂದ ಪಡೆಯುವ ರಕ್ತದಿಂದ ಪ್ಲಾಸ್ಮಾವನ್ನು ಪ್ರತ್ಯೇಕಿಸುವ ಪ್ರಕ್ರಿಯೆಗೆ 7,500 ರೂ. ಶುಲ್ಕ ನಿಗದಿ ಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
Kshetra Samachara
03/10/2020 10:54 pm