ಬಂಟ್ವಾಳ: ತಾಲೂಕಿನ ಫರಂಗಿಪೇಟೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಗಂಭೀರವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ಮತ್ತು ಛಾಯಾಗ್ರಾಹಕ ದಿನೇಶ್ ಶೆಟ್ಟಿ ಕೊಟ್ಟಿಂಜ ಚಿಕಿತ್ಸೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 5 ಲಕ್ಷ ರೂ. ಮಂಜೂರು ಮಾಡಿದ್ದಾರೆ.
ಅವರ ಚಿಕಿತ್ಸೆಗೆ ಸರ್ಕಾರದಿಂದ ನೆರವು ನೀಡಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ನ.5ರಂದು ಮಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದ ಸಂದರ್ಭ ಮನವಿ ಮಾಡಿದ್ದರು.
ಇದೇ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರೂ ದಿನೇಶ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಅವರಿಗೆ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ನೆರವು ಒದಗಿಸಿದ್ದರು.
ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಮತ್ತಿತರರು ದಿನೇಶ್ ಅವರನ್ನು ಭೇಟಿಯಾಗಿ ನೆರವು ನೀಡಿದ್ದಾರೆ.
Kshetra Samachara
08/11/2020 11:23 am