ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಉಳ್ಳಾಲ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರ ರಕ್ಷಣಾ ಪಡೆಯ ಸಂಯುಕ್ತ ಆಶ್ರಯದಲ್ಲಿ ತಣ್ಣೀರುಬಾವಿಯ ಫಾತಿಮಾ ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಪ್ರಾಣಾಯಾಮ, ಯೋಗ ಶಿಬಿರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ ಭಾಗವಹಿಸಿ ಶಿಬಿರ ನಡೆಸಿಕೊಟ್ಟರು.
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಡಾ. ಮುರಳಿ ಮೋಹನ್ ಚೂಂತಾರು ನೇತೃತ್ವದಲ್ಲಿ ಸುಮಾರು 30 ಮಂದಿ ಈ ಶಿಬಿರದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭ ಗೃಹರಕ್ಷಕ ದಳ ಸಿಬ್ಬಂದಿ ಹಾಜರಿದ್ದರು.
Kshetra Samachara
10/11/2020 01:18 pm