ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬೆಟ್ಟು ಸರ್ಕಾರಿ ಶಾಲೆಯಲ್ಲಿ ರಕ್ತದಾನ ಶಿಬಿರ

ಸುರತ್ಕಲ್: ಜಾಕ್‌ಇಲೆವೆನ್ ಚೊಕ್ಕಬೆಟ್ಟು ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಜಂಟಿ ಸಹಭಾಗಿತ್ವದಲ್ಲಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ಮಂಗಳೂರಿನ ಸಹಭಾಗಿತ್ವದಲ್ಲಿ ಚಿಕ್ಕಬೆಟ್ಟು ಸರ್ಕಾರಿ ಶಾಲೆಯಲ್ಲಿ ರಕ್ತದಾನ ಶಿಬಿರವು ನಡೆಯಿತು.

ಶಿಬಿರಕ್ಕೂ ಮುನ್ನ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಮೊಯ್ದಿನ್ ಬಾವ ವಹಿಸಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಚೊಕ್ಕಬೆಟ್ಟು ಜುಮಾ ಮಸೀದಿಯ ಖತೀಬ್ ಅಝೀಝ್ ದಾರಿಮಿ ಪ್ರಾಸ್ತಾವಿಕ ಮಾತನಾಡಿದರು.

ಈ ಸಂದರ್ಭದಲ್ಲಿ ಕಾರ್ಪೊರೇಟರ್ ಶಂಶಾದ್, ಕಾನ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್, ಎಸ್‌ಡಿಪಿಐ ಮುಖಂಡ ನೌಶಾದ್, ಅಬೂಬಕರ್ ಕುಳಾಯಿ, ಅಬ್ದುಲ್ ಜಲೀಲ್, ಬ್ಲಡ್ ಡೋನರ್ಸ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಅಧ್ಯಕ್ಷರಾದ ಸಿದ್ದೀಕ್ ಮೊದಲಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

24/11/2020 04:52 pm

Cinque Terre

3.59 K

Cinque Terre

0

ಸಂಬಂಧಿತ ಸುದ್ದಿ