ಕಡಬ: ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರ ನಡೆದಿದೆ.
ಸುಳ್ಯ ತಾಲೂಕಿನ ಎಡಮಂಗಲ ಡೆಕ್ಕಳ ನಿವಾಸಿ ಹರಿಪ್ರಸಾದ್ ಅವರ ಪತ್ನಿ ಮೊದಲ ಹೆರಿಗೆಗಾಗಿ ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು.
ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಅಥವಾ ಸುಳ್ಯಕ್ಕೆ ಕರೆದೊಯ್ಯಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಬದ 108 ಆಂಬ್ಯುಲೆನ್ಸ್ ನಲ್ಲಿ ತೆರಳುತ್ತಿದ್ದಾಗ ಸುಳ್ಯ ಸಮೀಪದ ಐವರ್ನಾಡು ಸಮೀಪಿಸುತ್ತಿದ್ದಂತೆಯೇ ಮಹಿಳೆಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಂಬ್ಯುಲೆನ್ಸ್ ಸಿಬ್ಬಂದಿ, ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ- ಮಗು ಆರೋಗ್ಯವಾಗಿದ್ದಾರೆ.
ಆಂಬ್ಯುಲೆನ್ಸ್ ಸಿಬ್ಬಂದಿ ಪ್ರಜ್ಞಾ ಹಾಗೂ ರಾಜೇಶ್ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
Kshetra Samachara
10/12/2020 01:10 pm