ಮಂಗಳೂರು, ಡಿ.22: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಬೇಕೆದ್ದರೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಬೇಕಿದೆ. ಇಂಗ್ಲೆಂಡ್‌ನಲ್ಲಿ ಕೋವಿಡ್-19 ಸೋಂಕಿನ ಹೊಸ ತಳಿಯ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ.
ಬೆಂಗಳೂರು, ಮಹಾರಾಷ್ಟ್ರ, ಹೈದರಾಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ. ಜಿಲ್ಲೆಗೆ ಡಿ.7ರಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಲಾಗುತ್ತಿದ್ದು, ಎಲ್ಲರೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು.
ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟನೆ ತಿಳಿಸಿದೆ.
Kshetra Samachara
23/12/2020 05:05 pm