ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 272 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 24,829ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 382 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 18,786ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು 7 ಮಂದಿಗೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 581 ಕ್ಕೆ ಏರಿಕೆಯಾಗಿದೆ.
Kshetra Samachara
06/10/2020 08:46 pm