ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 362 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22,706ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 232 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 16,502ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು 9 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 524ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5,678 ಸಕ್ರೀಯ ಪ್ರಕರಣಗಳಿವೆ.
Kshetra Samachara
29/09/2020 09:37 pm