ಮಂಗಳೂರು: ಜಿಲ್ಲೆಯಲ್ಲಿ ಶನಿವಾರ 365 ಜನರಿಗೆ, ಭಾನುವಾರ 410 ಮಂದಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಆದರೆ ಇಂದು ಸೋಂಕಿತರ ಸಂಖ್ಯೆ ಕೊಂಚ ತಗ್ಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 219 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,00,999ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 210 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 96,617ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ನಾಲ್ವರು ಸಾವನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,431ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,948 ಸಕ್ರಿಯ ಪ್ರಕರಣಗಳಿವೆ.
Kshetra Samachara
02/08/2021 07:57 pm