ಮಂಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿಕೆಯಾಗುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ನಿನ್ನೆ 350 ಜನರಿಗೆ ಸೋಂಕು ದೃಢಪಟ್ಟಿದ್ದರೆ, ಇಂದು ಸಂಖ್ಯೆ 337ಕ್ಕೆ ತಲುಪಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,01,993ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 213 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 97,328ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಮೂವರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,448ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3,213 ಸಕ್ರಿಯ ಪ್ರಕರಣಗಳಿವೆ.
Kshetra Samachara
05/08/2021 07:15 pm