ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಪರಿಣಾಮ ಇಂದು ಕೂಡ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 320 ಜನರಿಗೆ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 1,07,671ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು 428 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 1,02,967ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ನಾಲ್ವರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,526ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3,173 ಸಕ್ರಿಯ ಪ್ರಕರಣಗಳಿವೆ.
Kshetra Samachara
21/08/2021 06:41 pm