ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಕೊಂಚ ನಿಯಂತ್ರಣಕ್ಕೆ ಬಂದಿದೆ. ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ 300ರ ಗಡಿ ದಾಟಿತ್ತು. ಆದರೆ ಇಂದು ಕೊರೊನಾ ಸಂಖ್ಯೆ ಸ್ವಲ್ಪ ಇಳಿಕೆ ಕಂಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 286 ಜನರಿಗೆ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 1,07,957ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು 418 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 1,03,385ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ನಾಲ್ವರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,530ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3,037 ಸಕ್ರಿಯ ಪ್ರಕರಣಗಳಿವೆ.
Kshetra Samachara
22/08/2021 06:41 pm