ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಕೊಂಚ ನಿಯಂತ್ರಣಕ್ಕೆ ಬಂದಿದೆ. ಇಂದು 193 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,09,802ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಸೋಂಕಿನಿಂದ 256 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 1,05,882ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1563ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,352 ಸಕ್ರಿಯ ಪ್ರಕರಣಗಳಿವೆ.
Kshetra Samachara
30/08/2021 07:35 pm