ಮಂಗಳೂರು: ಜಿಲ್ಲೆಯಲ್ಲಿ ಇಂದು 183 ಜನರಿಗೆ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ1,11,058ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಸೋಂಕಿನಿಂದ ಇಂದು 221 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 1,07,357ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,589ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,107 ಸಕ್ರಿಯ ಪ್ರಕರಣಗಳಿವೆ.
Kshetra Samachara
05/09/2021 06:55 pm