ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುವಂತೆ ಕಾಣುತ್ತಿಲ್ಲ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 795 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,26,954ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು 992 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 1,19,535ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಮೂವರು ಸಾವನ್ನಪ್ಪಿದ್ದು, ಈವರೆಗೂ 1,712 ಜನ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 5,700 ಸಕ್ರಿಯ ಪ್ರಕರಣಗಳಿವೆ.
Kshetra Samachara
22/01/2022 09:44 pm