ಮಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,35,480ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು 8 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 1,33,620ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ 1,840 ಜನ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 10 ಸಕ್ರಿಯ ಪ್ರಕರಣಗಳಿವೆ.
Kshetra Samachara
24/03/2022 08:27 pm