ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 217 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22,344ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 190 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 16,270ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು 7 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 515ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5,557 ಸಕ್ರೀಯ ಪ್ರಕರಣಗಳಿವೆ.
Kshetra Samachara
28/09/2020 10:08 pm