ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದ ಕಾಲೇಜ್ ಆಫ್ ಪಿಸಿಯೋಥೆರಪಿ ವಿಭಾಗದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಎರಡು ಯಂತ್ರೋಪಕರಣವನ್ನು ಉಡುಪಿಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು.
ಪಿಸಿಯೋಥೆರಪಿಯಲ್ಲಿ ಉನ್ನತ ಮಟ್ಟದ ಚಿಕಿತ್ಸೆ ನೀಡುವ ಸಲುವಾಗಿ ಟೆಕ್ ಲೇಸರ್ ಎಸ್ಸ್ 2000 ಮತ್ತು ವೇವ್‌ಸ್ಟಾರ್ ಅತ್ಯಾಧುನಿಕ ಯಂತ್ರೋಪಕರಣ ಅಳವಡಿಸಲಾಗಿದೆ.
ಇದು ಹೊರ ರೋಗಿ ವಿಭಾಗದ ರೋಗಿಗಳಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅಳವಡಿಸಲಾಗಿದೆ.
ಶ್ರೀನಿವಾಸ್ ವಿವಿ ಕುಲಾಧಿಪತಿ ರಾಘವೇಂದ್ರ ರಾವ್, ಸಹ ಕುಲಾಧಿಪತಿ, ಡಾ. ಎ. ಶ್ರೀನಿವಾಸ್ ರಾವ್, ಕುಲಪತಿ ಡಾ. ಪಿ. ಎಸ್. ಐತಾಳ್, ಕುಲಸಚಿವರು ಹಾಗೂ ಆಡಳಿತ ಮಂಡಳಿಯ ಟ್ರಸ್ಟಿಗಳು ಉಪಸ್ಥಿತರಿದ್ದರು.
Kshetra Samachara
24/10/2020 10:35 pm