ಪುತ್ತೂರು: ಭಾರತೀಯ ಜನತಾ ಪಾರ್ಟಿ ಬಲ್ನಾಡು ಶಕ್ತಿಕೇಂದ್ರದ ವತಿಯಿಂದ ಭಾರತ ಸರ್ಕಾರದ ಮಹತ್ವದ ಆರೋಗ್ಯ ರಕ್ಷಣಾ ಯೋಜನೆಯಾದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣೆ ಕಾರ್ಯಕ್ರಮವು ಬಲ್ನಾಡುವಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪುತ್ತೂರು ಕ್ಷೇತ್ರ ಶಾಸಕರಾದ ಸಂಜೀವ ಮಠಂದೂರುರವರು ಉದ್ಘಾಟಿಸಿ, ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರಾಧಾಕೃಷ್ಣ ಆಳ್ವ, ಪುತ್ತೂರು ಬಿಜೆಪಿ ನಗರಮಂಡಲ ಅಧ್ಯಕ್ಷರಾದ ಜಗನ್ನೀವಾಸ ರಾವ್, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ದಿವ್ಯ ಪುರುಷೋತ್ತಮ, ಕ್ಯಾಂಪ್ಕೋ ನಿರ್ದೇಶಕರಾದ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಶ್ರೀ ಸುನಿಲ್ ದಡ್ಡು,
ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು, ಫಲಾನುಭವಿಗಳು ಉಪಸ್ಥಿತರಿದ್ದರು.
Kshetra Samachara
19/09/2020 12:54 pm